ಹುಲಿವೇಷ -ನಿಮಗೆಷ್ಟು ಗೊತ್ತು..?

Video Description

ಹುಲಿವೇಷ -ನಿಮಗೆಷ್ಟು ಗೊತ್ತು..? ಹುಲಿವೇಷ ಹಾಕುವುದು ಸಾಮಾನ್ಯವಾಗಿ ಕರ್ನಾಟಕ ತುಂಬೆಲ್ಲ ಕಂಡುಬರುವ ಒಂದು ಜನಪದ ಕಲೆ. ಬಿಸಿಲು ಮಳೆ ಚಳಿಯಲ್ಲಿ ಬರಿಮೈಯಲ್ಲಿ ನಿಂತು ಸಹಿಸಿಕೊಂಡು ಕುಣಿದು ಕುಪ್ಪಳಿಸುವ ಶಕ್ತಿಯುಳ್ಳ ಯಾವ ಜನಾಂಗದ ವ್ಯಕ್ತಿಯಾದರೂ ಹುಲಿವೇಷ ಹಾಕಬಹುದು. ಮನರಂಜನೆಗಾಗಿ ಹೊಟ್ಟೆಪಾಡಿಗಾಗಿ ಹುಲಿವೇಷ ಧರಿಸುವ ಕಲಾವಿದರೂ ಇದ್ದಾರೆ. ಹುಲಿವೇಷ ಧರಿಸಿದವರು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಪ್ರದರ್ಶನ ನೀಡುತ್ತಾರೆ. ಹುಲಿವೇಷಧಾರರಿಗೆ ಹೆಜ್ಜೆಗಾರಿಕೆಯ ಪರಿಚಯ ಇರಬೇಕಾಗಿರುತ್ತದೆ. ಇಲ್ಲದೆ ಹೋದರೆ ಹುಲಿ ಕುಣಿತಕ್ಕೆ ಕಳೆ ಬರುವುದಿಲ್ಲ. ಹಲಗೆ ತಮಟೆಯ ವಾದ್ಯಗಳ ಗತ್ತಿಗೆ ತಕ್ಕಂತೆ ಹುಲಿ ವೇಷದಾರಿ ಕುಣಿಯುತ್ತಾನೆ. ಮರಿ ಹುಲಿ ಜೊತೆಗಿದ್ದರೆ ಕುಣಿತಕ್ಕೆ ಹೆಚ್ಚಿನ ಕಳೆ ಬರುತ್ತದೆ. ಮೇಲಿಂದ ಮೇಲೆ ಗಿರಿಕಿ ಹೊಡೆಯುತ್ತಾ, ಹುಲಿಯಂತೆ ನಟನೆ ಮಾಡುತ್ತಾ, ಕೆಲವರ ಮೇಲೆರಿ ಹೋಗುವಂತೆ ಮಾಡಿ ಅಂಜಿಸುತ್ತ ಜನರನ್ನು ರಂಜಿಸುತ್ತಾನೆ. ವಾದ್ಯಗಳ ಬಡಿತ ತೀವ್ರವಾದಂತೆ ಕುಣಿತ ತೀವ್ರವಾಗುತ್ತದೆ.

Join more than 1 million learners

On Spark.Live, you can learn from Top Trainers right from the comfort of your home, on Live Video. Discover Live Interactive Learning, now.